Wednesday, July 20, 2011

ದೇಹದಾನ !!!

"ಏನ್ ತಾತ,ನಮ್ಮಪ್ಪ ಬಂದು ಕೇಳಿದ್ರೆ ಕೊಡಲ್ಲ ಅಂದಂತೆ "....ಮುಸ್ಸಂಜೆಯಲ್ಲಿ ಹೊಲದಿಂದ ಬಂದು,ಪುಷ್ಪಾಳಿಗೆ   ಟೀ ತರಲು ಏಳಿ ಜಗುಲಿಯ ಮೇಲೆ ಬೀಡಿ ಸೇದುತ್ತ ಕುಳಿತಿದ್ದಾಗ,ಏಕಾ  ಏಕಿ ಯಮುನಾ ಬಂದು ಹೀಗೆ ಕೂಗಾಡಿದಳು...
ಯಮುನಾ ನನ್ನ ಮೊದಲನೇ ಮಗ ಶೇಖರನ  ಮಗಳು....ಪುಷ್ಪ ನನ್ನ ಎರಡನೇ ಮಗ ಮೂರ್ತಿಯ ಹೆಂಡತಿ..
ಇಬ್ಬರೂ ಮಕ್ಕಳಿಗೂ ಬೇರೆ ಬೇರೆ ಮನೆ ಕಟ್ಟಿಸಿ ಕೊಟ್ಟಿದ್ದೇನೆ,
ಹಿರಿಯ ಮಗ ಶೇಖರನಿಗೆ ಹೊಸ ಮನೆಯನ್ನು ಕೊಟ್ಟಿದ್ದೇನೆ,ನನ್ನ ಪಿತ್ರಾರ್ಜಿತ ಹಳೆ ಮನೆಯನ್ನು ಕಿರಿಯ ಮಗನಿಗೆ ಕೊಟ್ಟು,ನಾನು ಅವನ ಮನೆಯಲ್ಲೇ ಇದ್ದೇನೆ,
ಆಗಾಗ  ಎರಡೂ  ಮನೆಗೆ ಹೋಗಿ ಬರುತ್ತಿರುತ್ತೇನೆ...
ಯಮುನಾ ಹೀಗೆ ಗದರುವುದನ್ನು ಕೇಳಿಸಿಕೊಂಡ ಪುಷ್ಪ ಹೊಳಗಿನಿಂದ ಬಂದು "ಏ ಇದೆಲ್ಲ ದೊಡ್ಡವರ ವಿಷಯ,ನಿಮ್ಮಪ್ಪ ಬಂದು ಮಾತಾಡುತ್ತಾರೆ,ನೀನ್ ಇದರಲೆಲ್ಲ ತಲೆ ಹಾಕಬೇಡ,ಸುಮ್ನೆ ಹೋಗಿ ಓದ್ಕೋ ಹೋಗು,
ಯಜಮಾನಗಿತ್ತಿ ತರಹ ಬಂದು ಬಿಟ್ಟಳು " ಅಂತ ಅಂದಳು..
"ಏನ್ ಚಿಕ್ಕಮ್ಮ ,ನಾನೇನ್ ಚಿಕ್ಕವಳಲ್ಲ,ನಾನು ಇವಾಗ ಮೇಜರ್ ,ನನಗೂ ಕೇಳೋ ಹಕ್ಕಿದೆ,ನಿಮಗೆಷ್ಟು  ಹಕ್ಕಿದ್ಯೋ ಅಷ್ಟೇ ನನಗೂ ಇದೆ  "ಎಂದಾಗ ಒಂದು ಕ್ಷಣ ನನ್ನ ಎದೆ ಬಡಿತ ನಿಂತು ಬಿಟ್ಟಿತ್ತು...
ಇವಳೇನಾ ಹದಿನೆಂಟು ವರ್ಷದಿಂದ ಮುದ್ದಾಗಿ ಸಾಕಿದ ಮೊಮ್ಮಗಳು,ನನ್ನ ತೊಡೆ ಮೇಲೆ ಮಲಗಿಕೊಂಡು ಕಥೆ ಕೇಳುತ್ತಿದ್ದವಳು ಇವಳೇನಾ,
ಎಷ್ಟು ಪ್ರೀತಿಯಿಂದ ಸಾಕಿದ್ದೆ,ಪ್ರತಿ ವರ್ಷ ಊರ ಅಮ್ಮನ ಜಾತ್ರೆಗೆ ಹೊಸ ಬಟ್ಟೆ ಕೊಡಿಸುತ್ತಿದ್ದೆ....
ಇದಕಿಂತ ಎರಡು  ದಿನ ಮುಂಚೆ ಅವಳ ಅಪ್ಪ ಬಂದು  ಇದೆ ರೀತಿ ಗಲಾಟೆ ಮಾಡಿದ್ದ..ಹುಟ್ಟಿಸಿದ ತಪ್ಪಿಗೆ ನನ್ನ ಎದೆ ಮೇಲೆ ಒದ್ದಿದ್ದಾನೆ...
ಇಬ್ಬರೂ ಮಕ್ಕಳಿಗೆ ನಾನೇನು ಕಡಿಮೆ ಮಾಡಿಲ್ಲ..
ಇಬ್ಬರ ಹೆಸರಿಗೂ ಇರುವ ಜಮೀನನ್ನು ಸರಿಯಾಗಿ ಪಾಲು ಮಾಡಿ ಪಾಲುಪಾರಿಕತ್ತು ಬರೆದಾಗಿದೆ...ಹಿರಿ ಮಗನ ಗಲಾಟೆ ತಾಳಲಾರದೆ ಈ  ಕೆಲಸವನ್ನು ಬಹಳ ಹಿಂದೆಯೇ ಮಾಡಿ ಬಿಟ್ಟಿದ್ದೇನೆ...ಆದರೆ ಅವರ ಹೆಸರಿಗೆ ಇನ್ನು ನೊಂದಾಯಿಸಿಲ್ಲ ಅಷ್ಟೇ...ಹೇಗೆ ಆದರೂ ಅವರಿಗೆ ಆ ಜಮೀನು ..ಆದರೂ ಹಿರಿ ಮಗ ಮಾತ್ರ ಆದಷ್ಟು ಬೇಗ ತನ್ನ ಹೆಸರಿಗೆ ಮಾಡಿಸಿಕೊಳ್ಳಲು ನೋಡುತ್ತಿದ್ದಾನೆ...
ಕೆಲವು ದಿನಗಳ ಹಿಂದೆ ನಂಜೇಗೌಡ ಬಂದು ಅವರವರ  ಜಮೀನನ್ನು ಅವರ ಹೆಸರಿಗೆ ಮಾಡಿಕೊಡು,ಸುಮ್ನೆ ಯಾಕೆ ಇನ್ನು ನಿನ್ನ ಹೆಸರಲ್ಲಿ ಇಟ್ಕೊ೦ಡಿದಿಯ ಅಂತ ಕೇಳಿದ್ದ,ನಿನಗ್ಯಾಕೆ ನಮ್ಮ ಮನೆ ವಿಚಾರ ಅಂತ ಬೈದು ಕಳ್ಸಿದ್ದೆ..ನಂಜೇಗೌಡ ಅಂದ್ರೆ ಕೆರೆ ಪಕ್ಕದ ನಮ್ಮ ಗದ್ದೆಯ ಪಕ್ಕದಲ್ಲೇ ಅವನ ಗದ್ದೆ ಇದೆ..ಅಲ್ಲಿ ನನ್ನ ಇಬ್ಬರೂ ಮಕ್ಕಳಿಗೂ ಪಾಲಿದೆ,ಅದರಲ್ಲಿ ಶೇಖರ ತನ್ನ ಪಾಲನ್ನು ನಂಜೇಗೌಡನಿಗೆ  ಮಾರುವುದಾಗಿ ಹೇಳಿ ಅವನ ಹತ್ತಿರ ಸ್ವಲ್ಪ ಹಣ ಕೂಡ ತಗೊಂಡಿದ್ದಾನೆ...ಅದಕ್ಕಾಗಿ ಈ ರೀತಿ ಅಪ್ಪ ಮಗಳು ಇಬ್ಬರೂ ಜಗಳ ಮಾಡುತ್ತಿದ್ದಾರೆ..

ಇಬ್ಬರು  ಮಕ್ಕಳಲ್ಲಿ ಈ ಶೇಖರ ತುಂಬ ಸೋಮಾರಿ...ಇಬಾರಿಗೂ ತಮ್ಮ ತಮ್ಮ ಜಮೀನನ್ನು ಪಾಲು ಮಾಡಿ ಕೊಟ್ಟು ೨ ವರ್ಷ ಆಯಿತು...ಈ ಮೂರ್ತಿನಾದರು,ಏನಾದ್ರು ಬೆಳೆ ಬೆಳೆದು ಜೀವನ ಮಾಡ್ತಿದ್ದಾನೆ...ಅದರ ಜೊತೆಗೆ ಎರಡು ಹಸು ಸಾಕಿದ್ದಾನೆ...ಗಂಡ ಹೆಂಡತಿ ಇಬ್ಬರೂ ವಿದ್ಯಾವಂತರು... 
ಮನೆ ಹಿರಿ ಮಗ ಆಗಿ ಅವನು ಇರುವ ಜಮೀನನ್ನು ಮಾರಲು ತಯ್ಯಾರಿದ್ದಾನೆ..
ಬೇಲಿಯೇ ಎದ್ದು ಹೊಲ ಮೆಯ್ದ ಹಾಗೆ   ಆಯಿತು..

೩೦ ವರ್ಷದ ಹಿಂದೆ ಸಿಕ್ಕ ಮೇಷ್ಟು ಕೆಲಸ ಬಿಟ್ಟೆ,ಬರಿ ೪೦ ರುಪಯೀ ಸಂಬಳ...ಆಗಿನ ಕಾಲದಲ್ಲಿ ಅದೇ ಹೆಚ್ಚು...ಆದರೂ ನಾನು ನನ್ನ ಅಣ್ಣ ಇಬ್ಬರೂ ಕೆಲಸಕ್ಕೆ ಸೇರಲಿಲ್ಲ...ನಮ್ಮ ಜಮೀನಿನಲ್ಲೆ ಬೇಕಾದಷ್ಟು ಆದಾಯ ಬರುತಿತ್ತು...
ಪಿತ್ರಾರ್ಜಿತ ಆಸ್ತಿಯ ಜೊತೆಗೆ ಒಂದಷ್ಟು ಬೇರೆಯವರಿಂದ ಕೊಂಡು..ಹೊಸ ಮನೆ ಕಟ್ಟಿಸಿ,ಅದನ್ನು ಹಿರಿಯ ಮಗನಿಗೆ ಕೊಟ್ಟಿದ್ದೇನೆ....ಮೂರ್ತಿ ಮತ್ತು ಅವನ ಹೆಂಡತಿ ಇಬ್ಬರಿಗೂ ಸ್ವಲ್ಪ  ಜವಾಬ್ದಾರಿ ಅನ್ನೋದು ಇದೆ...ಆದರೆ ಶೇಖರ ಆಗಲಿ ಅವನ ಹೆಂಡತಿಗಾಗಲಿ ಇಬ್ಬರೂ ಸೋಮಾರಿಗಳೇ...ಭಂಡರು..ದುಡಿದು ತಿನ್ನ ಬೇಕೆಂಬ ಯೋಚನೆಯೇ ಇಲ್ಲ...ಇರುವ ಆಸ್ತಿಯನ್ನು ಮಾರಿ ತಮ್ಮ ಮಗಳ ಮದುವೆ ಮಾಡುವ ನಿರ್ಧಾರ ಮಾಡಿರಬಹುದು..
ಬೇಕಾದಷ್ಟು ಸಾಲ ಮಾಡಿದ್ದಾನೆ,ಅದನ್ನೆಲ್ಲೇ ತೀರಿಸಲು ಈಗ ಜಮೀನನ್ನು  ತನ್ನ ಹೆಸರಿದೆ ಮಾಡಿ ಕೊಡಿ ಎಂದು ಪೀಡಿಸುತ್ತಿದ್ದಾನೆ..

ಅಪ್ಪನ ಆಸ್ತಿಯಲ್ಲಿ ಬೆವರು ಸುರಿದಿ ದುಡಿದು ಅದಕ್ಕೆ ಇನ್ನೊಂದಿಷ್ಟು ಹೊಲ ಗದ್ದೆಗಳನ್ನು ತೆಗೆದು ಕೊಂಡಿದ್ದೇನೆ... ಈಗ ಅವನ ಹೆಸರಿಗೆ ಮಾಡಿ ಕೊಟ್ಟರೆ ಅದನ್ನೆಲ್ಲಾ ನನ್ನ ಕಣ್ಣ ಮುಂದೆಯೇ ಮಾರುತ್ತಾನೆ,,ಅದಕ್ಕೆ ಅವನ ಹೆಸರಿಗೆ ಮಾಡಲು ಹಿಂದೆ ಮುಂದೆ ನೋಡುತ್ತಿದ್ದೇನೆ...
ಇದೆಲ್ಲಕಿಂತ ಮಿಗಿಲಾಗಿ  ನನ್ನ ಮುದ್ದು ಮೊಮ್ಮಗಳು ಬಂದು ಈ ರೀತಿ ಕೇಳಿದಳಲ್ಲ?ಅದೇ ಬೇಜಾರು..
"ಸರಿ ಹೋಗಮ್ಮ ,ನಿಮ್ಮ ಅಪ್ಪನ ಬರಕ್ಕೆ ಹೇಳು...ಮುಂದಿನ ವಾರ ತಾಲೂಕ್ ಆಫೀಸಿನಲ್ಲಿ ಎಲ್ಲಾ ದಾಖಲೆಗಳನ್ನ ಕೊಡ್ತೀನಿ ಅಂತ ಹೇಳು ನಿನ್ನ ಅಪ್ಪಂಗೆ "ಅಂದ ಕೂಡಲೇ ಹಿಂದಕ್ಕೆ ತಿರುಗಿ  ನೋಡದ  ಹಾಗೆ ಹೋದಳು..
ನನಗೂ ಅವಳ ಮುಖ ನೋಡಲಿ ಇಷ್ಟ ಇಲ್ಲದೆ ಕತ್ತು ಬಗ್ಗಿಸಿ ಕೊಂಡಿಯೇ ಇದ್ದೆ.....
ಮೊಮ್ಮಗಳ ಆಸೆ ಕೂಡ ಅದೇ ಆಗಿರಬೇಕು...ನನ್ನ ಮಗಳು ಯಾವತ್ತು ಕೂಡ ಈ ರೀತಿ ತಿರುಗಿ ಮಾತಾಡಿರಲಿಲ್ಲ..ಆದರೆ...
ಶೇಖರ ತನ್ನ ಜಮೀನನ್ನು ನಂಜೇಗೌಡರಿಗೆ  ಮಾರುವುದಂತು ಖಚಿತ..ಅವರ ಅಸ್ತಿ ಏನು ಬೇಕಾದರೂ ಮಾಡಿಕೊಳ್ಳಲಿ...

ನನ್ನ ಹೆಂಡತಿ ತೀರಿಕೊಂಡಾಗ,ಶೇಖರ ತನ್ನ ಪಾಲಿನ ಹೊಲದಲ್ಲಿ ಅಂತ್ಯಕ್ರಿಯೆ ಮಾಡಲು ಚಕಾರ ಎತ್ತಿದ್ದ....ತಾಯಿ ಅಂತ್ಯಕ್ರಿಯೇಯಲ್ಲೂ ಸಣ್ಣ ಪುಟ್ಟದಕ್ಕೆ ಲೆಕ್ಕ ಬರೆದು ಮೂರ್ತಿ ಹತ್ತಿರ ಖರ್ಚಿನ  ಅರ್ಧ ಭಾಗ ತೆಗೆದು ಕೊಂಡಿದ್ದ...
ನನಗೂ ವಯಸ್ಸಾಯಿತು...ನನ್ನ ಆಯಸ್ಸು ಕೂಡ ಮುಗಿಯುತ್ತ ಬಂತು...ಅವರ ಹೆಸರಿಗೆ ಹೊಲ ತೋಟ ಎಲ್ಲಾ ಮುಂದಿನ ವಾರ ಮಾಡಿಕೊಡುತ್ತೇನೆ..
ಈಗಾಗಲೇ ನನ್ನ ಮರ್ಯಾದೆಯನ್ನು ಮಗ ,ಮೊಮ್ಮಗಳು ಸೇರಿ ಊರವರ  ಮುಂದೆ  ಕಳೆದು ಹಾಗಿದೆ...
ಅದಕ್ಕೆ ಇವರ ಚಿಂತೆಯೇ ಬೇಡ...
ಆಗ ಸಿಕ್ಕಿದ್ದ ಮೇಷ್ಟು ಕೆಲಸಕ್ಕೆ ಹೋಗಿದ್ದರೆ ಈಗ ಈ ರೀತಿ ಹರಿದ ಚಪ್ಪಲಿ ಹಾಕಿಕೊಂಡು ಓಡಾಡುವ  ಸ್ಥಿತಿ ಇರುತ್ತಿರಲಿಲ್ಲ...ಈ ನನ್ನ ಹಿರಿ ಮಗನಿಗೆ ಕಡೆ ಪಕ್ಷ ಒಂದು ಜೊತೆ ಚಪ್ಪಲಿ ಕೊಡಿಸಬೇಕೆಂಬ ಆಸೆ ಇಲ್ಲ,ಆದರೆ ಜಮೀನು ಮಾತ್ರ ಬೇಕು...ಆ ಕೆಲ್ಸಕ್ಕೆ ಹೋಗಿದ್ದರೆ ಪಿಂಚಣಿಯಾದರು ಬರುತ್ತಿತ್ತು...
ಅವರಾದರೂ ನೆಟ್ಟಗೆ ಓದಿದ್ದರೆ ಈ ರೀತಿಯ ದುರ್ಬುದ್ಧಿ ಅವನಿಗೆ ಬರುತ್ತಿರಲಿಲ್ಲ... ಆದರೂ ಓದುತ್ತಿರುವ ಮೊಮ್ಮಗಳಿಗೆ ಏಕೆ ಬಂತು?....
ಇನ್ನೇನು ಮಾಡಲು ಸಾಧ್ಯವಿಲ್ಲ...ನಾನು ಸತ್ತಾಗ ಕೂಡ ನನ್ನ ಮಕ್ಕಳು ಕಿತ್ತಾಡುವುದು  ಬೇಡ..ಮರ್ಯಾದೆ ಹಾಳು ಮಾಡಿಕೊಳ್ಳುವುದು ಬೇಡ...ಮತ್ತೆ ಅದೇ ತರಹ ಜಗಳ ಮಾಡಿಕೊಂಡು ಕೂರುವುದು ಬೇಡ...
......ಅದಕ್ಕೆ ಯಾವುದಾದರು ಕಾಲೇಜಿಗೆ ದೇಹದಾನ ಮಾಡಲು ನಿರ್ಧಾರ ಮಾಡಿದ್ದೇನೆ ,ಯಾವುದಾದರು ಆಸ್ಪತ್ರೆಗೆ ಪತ್ರ ಬರೆಯಬೇಕು ಎಂದು ಕೊಂಡಿದ್ದೇನೆ..
ಯಾವ ಮಕ್ಕಳಾದರು ನನ್ನ ದೇಹದಿಂದ ಎನಾದ್ರೂ  ಕಲಿತುಕೊಳ್ಳಲಿ....ಅವರಿಗಾದರೂ ಒಳ್ಳೆಯದಾಗಲಿ...
ಮನೆಯ ಹಿರಿ ಮಗನಿಗೆ ಜವಾಬ್ದಾರಿ ಇಲ್ಲ ಅಂದರೆ ಅಥವಾ ಅವನಿಗೆ ದುಡಿದು ತಿನ್ನ ಬೇಕು ಎಂಬ ಹಂಬಲ ಇಲ್ಲ ಅಂದರೆ,ಹೆತ್ತವರ ಮೇಲೆ ಗೌರವ ಇಲ್ಲ ಅಂದರೆ ಇದೆ ಕಥೆ..
ಏನೋ ಇನ್ನು ಮುಂದೆ ನನಗೆ ನನ್ನ ಬೀಡಿಯೇ ಸಂಗಾತಿ...ಜೀವನದ ಕೊನೆಗಾಲವನ್ನು ಈ ರೀತಿ ಕಳೆಯುತ್ತೇನೆ ಎಂದು ಯಾವತ್ತಿಗೂ ಭಾವಿಸಿರಲಿಲ್ಲ...
 ಕೊನೆ ದಿನಗಳ ಎಣಿಕೆಯಲ್ಲಿ ಸಾಗುತ್ತಿದ್ದೇನೆ..
ಅವನು ತನ್ನ ಜಮ್ಮೀನನ್ನು ನನ್ನ ಕಣ್ಣ ಮುಂದೆ ಬೇರೆಯವರಿಗೆ ಮಾರುವ ಮೊದಲು ನನ್ನ ಕಣ್ಣು ಶಾಶ್ವತವಾಗಿ ಮುಚ್ಚಿದರೆ  ಒಳ್ಳೆಯದು...
 

28 comments:

  1. ತುಂಬಾ ಚೆನ್ನಾಗಿದೆ ಕಥೆ ಗಿರೀಶ್, ಅಪ್ಪ ತಾನು ಸಂಪಾದಿಸಿದ ಆಸ್ತಿಯನ್ನು ಮಕ್ಕಳೇ ಮಾರುವುದನ್ನು ಕಂಡರೆ ಬೇಸರ ಖಂಡಿತಾ ಆಗುತ್ತದೆ. ವಿದ್ಯೆ ಇದ್ದರೂ ಒಂದೇ ಇಲ್ಲದಿದ್ದರೂ ಒಂದೇ ಆಸ್ತಿ,ಹಣ ಎಂದು ಬಂದಾಗ ಜನ ಕಿತ್ತಾಡುವುದು ಬಿಡುವುದಿಲ್ಲ

    ReplyDelete
  2. @ಸುಗುಣ ಮೇಡಂ:ತುಂಬ ಧನ್ಯವಾದಗಳು...ಹಣದ ಮತ್ತು ಆಸ್ತಿಯ ವಿಷಯವಾಗಿ ಎಷ್ಟೋ ಸಂಸಾರಗಳು ಬಿರುಕುಗೊಂಡಿವೆ...

    ReplyDelete
  3. girish sir avidyavantaralli anyonyate ,
    anubhanda alpasvalpavaadaruu vulidide. nemmadiyindiruvavare aasti illadavaru.
    kate satyakke hattiravagide.

    ReplyDelete
  4. ಗಿರೀಶ,
    ಆಸ್ತಿಯನ್ನೆಲ್ಲ ಮಕ್ಕಳಿಗೆ ಹಂಚಿಕೊಟ್ಟು, ತನ್ನ ದೇಹವನ್ನು ದಾನ ಮಾಡುತ್ತಿರುವ ಮುದುಕನ ಕತೆಯನ್ನು ತುಂಬ ಸುಂದರವಾಗಿ ಬರೆದಿದ್ದೀರಿ.

    ReplyDelete
  5. @ಕಲರವ:ನಿಮ್ಮ ಮಾತಿನಲ್ಲೂ ಸತ್ಯಾಂಶವಿದೆ...ಪ್ರತಿಕ್ರಿಯೆಗೆ ಧನ್ಯವಾದಗಳು...ಹೀಗೆ ಬರುತ್ತಿರಿ !!!

    ReplyDelete
  6. @Sunaath Sir :ನಿಮ್ಮ ಮೆಚ್ಚುಗೆಗೆ ಧನ್ಯವಾದಗಳು...

    ReplyDelete
  7. ಚೆನ್ನಾಗಿದೆ ........:)

    ReplyDelete
  8. ಕೆಲವು ಹಿರಿ ಜೀವಗಳು ತಮ್ಮ ಪಾಡಿಗೆ ತಾವು ಇದ್ರೂ ಅವರನ್ನ ನೆಮ್ಮದಿಯಿಂದ ಇರೋಕ್ಕೆ ಬಿಡೋಲ್ಲ ಜನ.. ಬೇಜಾರಾಗತ್ತೆ ಯೋಚಿಸಿದರೆ.. ಹಣ ಉಳಿಯೋದಿಲ್ಲ ಹೆಣ ಆಗೋವಾಗ ಅನ್ನೋದನ್ನ ಯಾಕೆ ಜನ ಅರ್ಥ ಮಾಡಿಕೊಲ್ಲೋಲ್ವೋ?

    ಹಿರಿ ಜೀವದ ಮನಸನ್ನ ಸ್ಪಷ್ಟ ಮಾಡಿದ್ದೀರಾ ಗಿರೀಶ್.. ಇಷ್ಟ ಆಯಿತು. ಬರೆಯುತ್ತಿರಿ..

    ReplyDelete
  9. ಸಹನಾ ಅವರೇ ಕಥೆಯನ್ನು ಇಷ್ಟ ಪಟ್ಟಿದಕ್ಕೆ ಧನ್ಯವಾದಗಳು... ಹೀಗೆ ಬರುತ್ತಿರಿ !!!

    ReplyDelete
  10. Nice story Girish... Continue Madi...

    ReplyDelete
  11. ಆಶಾ ಮೇಡಂ:ಕಥೆ ಇಷ್ಟ ಪಟ್ಟಿದ್ದಕ್ಕೆ ಧನ್ಯವಾದಗಳು...

    ReplyDelete
  12. ಪ್ರವರ ಅವರೇ:ಧನ್ಯವಾದಗಳು..ಖಂಡಿತ ಬರೆಯುತ್ತೇನೆ...

    ReplyDelete
  13. ಚೆನ್ನಾಗಿದೆ ಗಿರೀಶ.

    ReplyDelete
  14. ಸುಭ್ರಮಣ್ಯ ಸರ್:ಧನ್ಯವಾದಗಳು... ಹೀಗೆ ಇರಲಿ ನಿಮ್ಮ ಪ್ರೋತ್ಸಾಹ...

    ReplyDelete
  15. ದೇಹದಾನ ಮಾಡಬೇಕೆನ್ನುವ ಉತ್ತಮ ನಿರ್ಧಾರದ ಕಥೆ ಚೆನ್ನಾಗಿದೆ. ಅಭಿನ೦ದನೆಗಳು ಗಿರೀಶ್.

    ReplyDelete
  16. ಪ್ರಭಾಮಣಿ ಮೇಡಂ: ಕಥೆ ಮೆಚ್ಚಿದಕ್ಕೆ ವಂದನೆಗಳು....

    ReplyDelete
  17. 'dehadaana' sheershikege takkante lekhanavide. Vaastavakke teera hattiravide..hattiravide..

    ReplyDelete
  18. ವಿಚಲಿತ:ನಿಮ್ಮ ಪ್ರತಿಕ್ರಿಯೆಗೆ ಧನ್ಯವಾದಗಳು ..ಹೀಗೆ ಬರುತ್ತಿರಿ

    ReplyDelete
  19. ಗಿರೀಶ್ ನಿಮ್ಮ ಬ್ಲಾಗಿಗೆ ಮೊದಲ ಪಯಣ ನನ್ನದು ಎನಿಸುತ್ತೆ,,, ಹಳ್ಳಿ ರೈತನ ತೊಳಲಾಟದ ಕಥೆ ಅದರಲ್ಲೂ ಮಕ್ಕಳ - ಹೆತ್ತವರ ಮಧ್ಯೆಯ ತಿಕ್ಕಾಟದ ಚಿತ್ರಣ...ಬರೆಯುತ್ತಿರಿ

    ReplyDelete
  20. ಆಜಾದ್ ಸರ್: ನಿಮ್ಮ ಪ್ರತಿಕ್ರಿಯೆ ಮತ್ತು ಪ್ರೋತ್ಸಾಹಕ್ಕೆ ಧನ್ಯವಾಗಳು... ಖಂಡಿತ ಬರೆಯುತ್ತೇನೆ..ಹೀಗೆ ಬರುತ್ತಿರಿ....

    ReplyDelete
  21. [Gold13]...ಧನ್ಯವಾದಗಳು...ಹೀಗೆ ಬರುತ್ತಿರಿ !!!

    ReplyDelete